Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:14 - ಕನ್ನಡ ಸತ್ಯವೇದವು C.L. Bible (BSI)

14 ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜರ್ ದೆವ್ ಗೊಸ್ಟ್ ದಿತಲೆ ಖಾಲಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲ್ಯಾಕ್ನಿ ದಿವ್ನ್ ಹೊತಾ ಮನುನ್ ರ್‍ಹಾಲ್ಯಾರ್, ವಿಶ್ವಾಸಾಕ್ ಕಾಯ್ಬಿ ಅರ್ಥ್‍ನಾ ಅನಿ ದೆವಾನ್ ದಿಲ್ಲ್ಯಾ ಗೊಸ್ಟಿಕ್ ಕಾಯ್ಬಿ ಕಿಮ್ಮತ್ ನಾ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:14
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II


ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು