Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖಾಯ್ದೊ ದೆವಾಚ್ಯಾ ರಾಗಾಕ್ ಖಾಲ್ತಿ ಉತ್ರುನ್ ಘೆವ್ನ್ ಯೆತಾ; ಖರೆ ಜೆ ಖಯ್ ಖಾಯ್ದೊಚ್ ನಾ, ಥೈ ಖಾಯ್ದ್ಯಾಚ್ಯಾ ಪರ್‍ಕಾರ್ ಚಲಿನಸಲ್ಲೆ ಮನ್ತಲೆ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:15
26 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.


ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.


ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು