Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:18 - ಕನ್ನಡ ಸತ್ಯವೇದವು C.L. Bible (BSI)

18 ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಬ್ರಾಹಾಮಾನ್ ವಿಶ್ವಾಸ್ ಕರ್‍ಲ್ಯಾನ್ ಅನಿ ಬರೊಸೊ ಥವ್ಲ್ಯಾನ್, ಬರೊಸೊ ಕರುಕ್ ಕಾಯ್ಬಿ ಕಾರನ್ ನತ್ತೊ ಜಾಲ್ಯಾರ್‍ಬಿ ತೆನಿ ಬರೊಸೊ ಥವ್ಲ್ಯಾನ್, ತೆಚೆಸಾಟ್ನಿ ತೊ “ಸುಮಾರ್ ದೆಶಾಂಚೊ ಬಾಬಾ ಹೊಲೊ” ಪವಿತ್ರ್ ಪುಸ್ತಕ್ ಮನ್ತಾ , “ತುಜ್ಯಾ ಪಿಳ್ಗಿಚಿ ಲೊಕಾ ಚಿಕ್ಕಿಯಾಂಚ್ಯಾ ಯೆವ್ಡಿ ರ್‍ಹಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:18
12 ತಿಳಿವುಗಳ ಹೋಲಿಕೆ  

ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.


ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.


ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು