Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:1 - ಕನ್ನಡ ಸತ್ಯವೇದವು C.L. Bible (BSI)

1 ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ಅಮ್ಕಾ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ಶಾಂತಿ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:1
53 ತಿಳಿವುಗಳ ಹೋಲಿಕೆ  

ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ.


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು