Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:18 - ಕನ್ನಡ ಸತ್ಯವೇದವು C.L. Bible (BSI)

18 ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗಿರಲಾಗಿ, ಆದಾಮನ ಒಂದು ಪಾಪವು ಎಲ್ಲಾ ಜನರಿಗೆ ಮರಣದಂಡನೆಯನ್ನು ತಂದಿತು. ಆದರೆ ಅದೇ ರೀತಿಯಲ್ಲಿ, ಕ್ರಿಸ್ತನು ಮಾಡಿದ ಒಂದೇ ಒಳ್ಳೆಯ ಕಾರ್ಯವು, ಎಲ್ಲಾ ಜನರನ್ನು ನೀತಿವಂತರನ್ನಾಗಿ ಮಾಡುತ್ತದೆ. ಮತ್ತು ಆ ಜನರಿಗೆ ಅದು ನಿಜವಾದ ಜೀವವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ರಾತಾನಾ, ಕಶೆ ಎಕ್ ಮಾನ್ಸಾಚ್ಯಾ ಪಾಪಾ ವೈನಾ ಚುಕಿದಾರ್ ಮನ್ತಲೊ ನಿರ್‍ನಯ್ ಯೆಲೊ, ತೆಸೆಚ್ ಎಕ್ಲೊ ಖರ್ಯ್ಯಾ ವಾಟೆನ್ ಚಲ್ತಲೊ ಸಗ್ಳ್ಯಾ ಲೊಕಾಕ್ನಿ ಸ್ವತಂತ್ರ್ ಕರ್‍ತಾ ಅನಿ ಜಿವ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:18
17 ತಿಳಿವುಗಳ ಹೋಲಿಕೆ  

ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು