ರೋಮಾಪುರದವರಿಗೆ 5:2 - ಕನ್ನಡ ಸತ್ಯವೇದವು C.L. Bible (BSI)2 ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅತ್ತಾ ಅಮಿ ಅಸಲ್ಲ್ಯಾ ದೆವಾಚ್ಯಾ ಕುರ್ಪೆಚ್ಯಾ ಅನ್ಭೊಗಾತ್ ವಿಶ್ವಾಸಾ ವೈನಾ ತೆನಿ ಅಮ್ಕಾ ಘೆವ್ನ್ ಯೆಲ್ಯಾನಾಯ್. ತೆಚೆಸಾಟ್ನಿ ದೆವಾಚಿ ಮಹಿಮಾ ವಾಟುನ್ ಘೆತಲ್ಯಾ ಹ್ಯಾ ಬರೊಸ್ಯಾತ್ ಅಮಿ ಘಮಂಡಿನ್ ಹಾಂವ್. ಅಧ್ಯಾಯವನ್ನು ನೋಡಿ |