Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:5 - ಕನ್ನಡ ಸತ್ಯವೇದವು C.L. Bible (BSI)

5 ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೊ ಬರೊಸೊ ಅಮ್ಕಾ ನಿರಾಸಿ ಹೊವ್ಕ್ ಸೊಡಿನಾ, ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾಚಿ ಎಕ್ ದೆನ್ಗಿ ಹೊವ್ನ್ ಹೊತ್ತ್ಯಾ ಪವಿತ್ರ್ ಆತ್ಮ್ಯಾಚ್ಯಾ ರುಪಾತ್ ದೆವಾನ್ ಅಪ್ನಾಚೊ ಪ್ರೆಮ್ ಅಮ್ಚ್ಯಾ ಮನಾತ್ನಿ ವೊತ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:5
35 ತಿಳಿವುಗಳ ಹೋಲಿಕೆ  

ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು