Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:1 - ಕನ್ನಡ ಸತ್ಯವೇದವು C.L. Bible (BSI)

1 ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಎಂದಿಗೂ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಾಗಾದರೆ ನಿಮ್ಮ ಅಭಿಪ್ರಾಯವೇನು? ದೇವರು ನಮಗೆ ಹೆಚ್ಚುಹೆಚ್ಚು ಕೃಪೆಯನ್ನು ತೋರಿಸಲೆಂದು ನಾವು ಪಾಪದಲ್ಲೇ ಮುಂದುವರಿಯಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಜಾಲ್ಯಾರ್ ಅಮಿ ಕಾಯ್ ಮನ್ತಲೆ? ದೆವಾಚಿ ಕುರ್ಪಾ ಜಾಸ್ತಿ ಹೊವ್ನ್ಗೆತ್ ಜಾಂವ್ದಿತ್ ಮನುನ್ ಪಾಪುಚ್ ಕರುನ್ಗೆತ್ ರ್‍ಹಾವ್ಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:1
9 ತಿಳಿವುಗಳ ಹೋಲಿಕೆ  

ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು