Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:15 - ಕನ್ನಡ ಸತ್ಯವೇದವು C.L. Bible (BSI)

15 ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪಾಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಿರಲಾಗಿ ನಾವೇನು ಮಾಡಬೇಕು? ನಾವು ಧರ್ಮಶಾಸ್ತ್ರದ ಅಧೀನದಲ್ಲಿರದೆ ಕೃಪೆಯ ಅಧೀನದಲ್ಲಿರುವುದರಿಂದ ಪಾಪ ಮಾಡಬೇಕೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆಹೊಲ್ಯಾರ್ ಕಾಯ್? ಅಮಿ ಖಾಯ್ದ್ಯಾಚ್ಯಾ ತಾಬೆತ್ ನಾವ್, ದೆವಾಚ್ಯಾ ಕುರ್ಪೆಚಾ ತಾಬೆತ್ ಹಾಂವ್ ಮನುನ್ ಕಾಯ್? ಹೊಲೆ? ಪಾಪಾ ಕರುಂವಾ ಕಾಯ್? ಹೆಚೊ ಅರ್ಥ್ ತಸೊ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:15
9 ತಿಳಿವುಗಳ ಹೋಲಿಕೆ  

ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು