Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:21 - ಕನ್ನಡ ಸತ್ಯವೇದವು C.L. Bible (BSI)

21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:21
46 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.


ಆದರೆ ದೇವಾಲಯವನು ಹೊಕ್ಕು ನಿಂತಾಗ I ಆ ಜನರ ಅಂತಿಮ ಗತಿಯನಾಲೋಚಿಸಿದಾಗ I ಋಜುವಾದ ಜ್ಞಾನೋದಯ ಆಯಿತೆನಗಾಗ II


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ


“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ


ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು