ರೋಮಾಪುರದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)4 ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೀಗಿರಲಾಗಿ, ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ, ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು ಮತ್ತು ನಾವು ಆತನ ಮರಣದಲ್ಲಿ ಪಾಲುಗಾರರಾದೆವು. ನಾವು ಜೀವಂತವಾಗಿ ಎದ್ದು ಹೊಸ ಜೀವಿತವನ್ನು ನಡೆಸಬೇಕೆಂದು ನಮಗೆ ಕ್ರಿಸ್ತನೊಂದಿಗೆ ಸಮಾಧಿಯಾಯಿತು. ಕ್ರಿಸ್ತನು ತಂದೆಯ ಅದ್ಭುತವಾದ ಶಕ್ತಿಯ ಮೂಲಕ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಜೀವಂತವಾಗಿ ಎದ್ದುಬಂದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆ ಹೊವ್ನ್ ಅಮ್ಚ್ಯಾ ಬಾಲ್ತಿಮಾ ವೈನಾ ಅಮಿ ತೆಚ್ಯಾ ಮರ್‍ನಾತ್ ವಾಟೊ ಘೆಟ್ಲ್ಯಾಂವ್ ಅನಿ ಅಮ್ಕಾ ತೆಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲಿ, ಅಶೆ ಜೆ ಕಶೆ ಕ್ರಿಸ್ತಾಕ್ ಬಾಬಾಚ್ಯಾ ಮಹಿಮೆಚ್ಯಾ ಬಳಾನ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ, ತಸೆಚ್ ಅಮಿಬಿ ಝಿತ್ತೆ ರ್‍ಹಾವ್ನ್ ಎಕ್ ನ್ಹವ್ಯಾ ಜಿವನಾತ್ ಚಲುಕ್ ಪಾಜೆ. ಅಧ್ಯಾಯವನ್ನು ನೋಡಿ |