Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:12 - ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಜಾಲ್ಯಾರ್, ಖಾಯ್ದೊ ತೆಚ್ಯಾ ಎವ್ಡ್ಯಾಕುಚ್ ಪವಿತ್ರ್, ಅನಿ ಉಪಾದೆಸ್ ಪವಿತ್ರ್, ಸಮಾ ಅನಿ ಬರೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:12
15 ತಿಳಿವುಗಳ ಹೋಲಿಕೆ  

ನಮಗೆಲ್ಲರಿಗೂ ತಿಳಿದಿರುವಂತೆ ಧರ್ಮಶಾಸ್ತ್ರವೇನೋ ಒಳ್ಳೆಯದು. ಆದರೆ ಅದನ್ನು ನಿಷ್ಠೆಯಿಂದ ಕಾರ್ಯಗತ ಮಾಡಬೇಕು.


ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ವರ್ಣಿಸಲಿ ನನ್ನ ನಾಲಿಗೆ ನಿನ್ನ ನುಡಿಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.


ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು