Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:15 - ಕನ್ನಡ ಸತ್ಯವೇದವು C.L. Bible (BSI)

15 ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೇಗಂದರೆ ನಾನು ಮಾಡುವದು ನನಗೇ ಗೊತ್ತಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಫೈಸುತ್ತೇನೋ ಅದನ್ನು ನಡಿಸದೆ ನನಗೆ ಅಸಹ್ಯವಾದದ್ದನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಮಾಡುವ ಕಾರ್ಯಗಳು ನನಗೇ ಅರ್ಥವಾಗುವುದಿಲ್ಲ. ನಾನು ಯಾವ ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಇಚ್ಛಿಸುತ್ತೇನೋ ಆ ಕಾರ್ಯಗಳನ್ನು ಮಾಡದೆ ನಾನು ದ್ವೇಷಿಸುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ಕಾಯ್ ಕರುಕ್ ಲಾಗ್ಲಾ ಮನುನ್ ಮಾಕಾಚ್ ಕಳಿನಾ; ಕಶ್ಯಾಕ್ ಮಟ್ಲ್ಯಾರ್ ಮಾಕಾ ಕರುಕ್ ಮನ್ ನಸಲ್ಲೆಚ್ ಮಿಯಾ ಕರ್‍ತಾ ಖರೆ ಜೆ ಕಾಯ್ ಮಿಯಾ ಕರ್‍ತಾ, ತೆ ಮಾಕಾ ಬರೆ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:15
32 ತಿಳಿವುಗಳ ಹೋಲಿಕೆ  

ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.


ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು