Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಬರೆ ಮಾಜ್ಯಾ ಭುತ್ತುರ್ ರ್‍ಹಾಯ್ನಾ ಮನುನ್ ಮಾಕಾ ಗೊತ್ತ್ ಹಾಯ್, ತೆ ಮಾಜ್ಯಾ ಮಾನುಸ್‍ ಪಾನಾಚ್ಯಾ ಸ್ವಬಾವಾತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ಬರೆ ಕರುಚೆ ಮನ್ತಲಿ ಆಶ್ಯಾ ಮಾಜ್ಯಾ ಭುತ್ತುರ್ ರ್‍ಹಾಲ್ಯಾರ್‍ಬಿ, ಮಾಜ್ಯಾನ್ ತೆ ಕರುಕ್ ಹೊಯ್ನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:18
31 ತಿಳಿವುಗಳ ಹೋಲಿಕೆ  

ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ.


ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.


ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು