Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:2 - ಕನ್ನಡ ಸತ್ಯವೇದವು C.L. Bible (BSI)

2 ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ದೃಷ್ಟಾಂತ - ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು; ಗಂಡನು ಸತ್ತರೆ ಗಂಡನ ಹಂಗು ಆಕೆಗೆ ತಪ್ಪುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಉದಾರನೆಕ್ ಎಕ್ ಬಾಯ್ಕೊಮನ್ಸಿಕ್ ತಿಚೊ ಘೊವ್‍ ಝಿತ್ತೊ ರ್‍ಹಾಯ್ ಪತರ್ ಎವ್ಡೆಚ್ ಖಾಯ್ದೊ ಭಾಂದುನ್ ಥವ್ತಾ; ಖರೆ ತೊ ಮರ್ಲೊ ತರ್, ತಿ ತ್ಯಾ ತೆಕಾ ಅನಿ ತಿಕಾ ಭಾಂದಲ್ಲ್ಯಾ ಖಾಯ್ದ್ಯಾತ್ನಾ ಸ್ವತಂತ್ರ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:2
6 ತಿಳಿವುಗಳ ಹೋಲಿಕೆ  

ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.


ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ.


ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ.


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು