Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:21 - ಕನ್ನಡ ಸತ್ಯವೇದವು C.L. Bible (BSI)

21 ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಳ್ಳೇದನ್ನು ಮಾಡಬೇಕೆಂದಿರುವ ನನಗೆ ಕೆಟ್ಟದ್ದೇ ಸಿದ್ಧವಾಗಿದೆಯೆಂಬ ನಿಯಮ ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ಮಿಯಾ ಬರೆ ಕರುಕ್ ಜಾತಾನಾ ಸಗ್ಳೆ ಬುರ್ಶೆಚ್ ಕರುಲ್ಲಾ ಮನ್ತಾನಾ ಹ್ಯೊ ಖಾಯ್ದೊ ಮಾಕಾ ಲಾಗು ಹೊತಾ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:21
19 ತಿಳಿವುಗಳ ಹೋಲಿಕೆ  

ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು