Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:22 - ಕನ್ನಡ ಸತ್ಯವೇದವು C.L. Bible (BSI)

22 ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮಾಜೊ ಭುತ್ತುರ್‍ಲೊ ಸ್ವಬಾವ್ ದೆವಾಚ್ಯಾ ಖಾಯ್ದ್ಯಾತ್ ಲೈ ಖುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:22
27 ತಿಳಿವುಗಳ ಹೋಲಿಕೆ  

ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ನಿನ್ನ ಕಟ್ಟಳೆಗಳು ನನಗೆ ಅಧಿಕ ಪ್ರಿಯ I ನನ್ನ ಅಂತರಂಗ ಅವುಗಳಿಗೆ ವಿಧೇಯ I


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ಯಾಜಕನು ಅವುಗಳನ್ನು ಪರೀಕ್ಷಿಸಬೇಕು . ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು, ಅವನು ಶುದ್ಧನು.


ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು