Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:24 - ಕನ್ನಡ ಸತ್ಯವೇದವು C.L. Bible (BSI)

24 ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕವ್ಡ್ಯಾ ಬುರ್ಶ್ಯಾ ಸ್ಥಿತಿರ್ ಪಾವಲ್ಲೊ ಮಾನುಸ್ ಮಿಯಾ! ಹ್ಯಾ ಮರ್ನಾತ್ ಘೆವ್ನ್ ಜಾತಲ್ಯಾ ಮಾಜ್ಯಾ ಆಂಗಾತ್ನಾ ಮಾಕಾ ಹುರ್ವುನ್ ಘೆತಲೊ ಕೊನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:24
36 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II


ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


ಎರಗಿವೆಯಾದರೂ ಕಷ್ಟ ಸಂಕಟಗಳು I ನನಗಾನಂದಾಯಕ ನಿನ್ನ ಆಜ್ಞೆಗಳು II


ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II


ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II


ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು