ರೋಮಾಪುರದವರಿಗೆ 7:25 - ಕನ್ನಡ ಸತ್ಯವೇದವು C.L. Bible (BSI)25 ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ. ಅಧ್ಯಾಯವನ್ನು ನೋಡಿ |