Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:6 - ಕನ್ನಡ ಸತ್ಯವೇದವು C.L. Bible (BSI)

6 ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈಗಲಾದರೋ ನಮ್ಮನ್ನು ವಶಮಾಡಿಕೊಂಡಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತಕಾರಣ ಆ ಧರ್ಮಶಾಸ್ತ್ರದಿಂದ ವಿಮುಕ್ತರಾಗಿದ್ದೇವೆ. ಹೀಗಿರಲಾಗಿ ಶಾಸ್ತ್ರದ ಹೊರಗಣ ಅರ್ಥಕ್ಕೆ ಅನುಕೂಲವಾದ ಹಳೇ ರೀತಿಯಲ್ಲಿ ನಾವು ದೇವರನ್ನು ಸೇವಿಸುವವರಲ್ಲ. ಪವಿತ್ರಾತ್ಮಪ್ರೇರಿತವಾದ ಹೊಸ ರೀತಿಯಲ್ಲಿ ಆತನನ್ನು ಸೇವಿಸುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಿಂದಿನ ಕಾಲದಲ್ಲಿ, ಧರ್ಮಶಾಸ್ತ್ರವು ನಮ್ಮನ್ನು ಸೆರೆಯಾಳುಗಳಂತೆ ಬಂಧಿಸಿತ್ತು. ಆದರೆ ನಮ್ಮ ಹಳೆಯ ಸ್ವಭಾವವು ಸತ್ತುಹೋದ ಕಾರಣ ನಾವು ಧರ್ಮಶಾಸ್ತ್ರದಿಂದ ಬಿಡುಗಡೆಯಾದೆವು. ಆದ್ದರಿಂದ ಈಗ ನಾವು ಲಿಖಿತ ನಿಯಮಗಳೊಡನೆ ಹಳೇ ರೀತಿಯಲ್ಲಿ ದೇವರ ಸೇವೆಮಾಡದೆ ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ದೇವರ ಸೇವೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅತ್ತಾ ಕಶೆ ತರ್ ಹೊಯ್ನಾ, ಅಮಿ ಖಾಯ್ಧ್ಯಾತ್ನಾ ಸ್ವತಂತ್ರ್, ಹಾಂವ್, ಕಶ್ಯಾಕ್ ಮಟ್ಲ್ಯಾರ್ ಅಮ್ಕಾ ಅದ್ದಿ ಧರುನ್ ಅಪ್ನಾಚ್ಯಾ ಬಂಧಿಖಾನ್ಯಾತ್ ಥವಲ್ಲ್ಯಾ ಖಾಯ್ದ್ಯಾಕ್ ಅಮಿ ಮರ್ಲಾಂವ್, ತೆಚೆಸಾಟ್ನಿ ಅನಿ ಫಿಡೆ ಅಮಿ ಲಿವಲ್ಲ್ಯಾ ಖಾಯ್ಧ್ಯಾಚ್ಯಾ ಪರ್‍ಕಾರ್ ನ್ಹಯ್, ಪವಿತ್ರ್ ಆತ್ಮ್ಯಾಚ್ಯಾ ನ್ಹವ್ಯಾ ವಾಟೆಚ್ಯಾ ಪರ್‍ಕಾರ್ ದೆವಾಚಿ ಸೆವಾ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:6
24 ತಿಳಿವುಗಳ ಹೋಲಿಕೆ  

ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.


ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು