Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:9 - ಕನ್ನಡ ಸತ್ಯವೇದವು C.L. Bible (BSI)

9 ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಎಕ್ ಎಳಾರ್ ಖಾಯ್ದೊ ಯೆಲ್ಲೊ ನಸಲ್ಲ್ಯಾ ತನ್ನಾ ಮಿಯಾ ಝಿತ್ತೊ ಹೊತ್ತೊ; ಜೆ ಕನ್ನಾ ಖಾಯ್ದೊ ಯೆಲೊ, ತನ್ನಾ ಮಾಜ್ಯಾ ಜಿವನಾತ್ ಪಾಪ್ ಚಿಗರ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:9
22 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”


ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು.


ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.


ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.


ಅದಕ್ಕೆ ಅವನು, “ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದನು.


ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.


ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.


ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು