Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:1 - ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಅಸಲ್ಲ್ಯಾಕ್ನಿ ಅತ್ತಾ ಚುಕಿದಾರ್ ಮನ್ತಲೊ ನಿರ್‍ನಯ್ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:1
32 ತಿಳಿವುಗಳ ಹೋಲಿಕೆ  

ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.


ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.


ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು.


ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.


ಹೀಗಿರಲಾಗಿ ನಾನು ಬಯಸದೆ ಇರುವುದನ್ನು ಮಾಡುವವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.


ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.


ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.


ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:


ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು