Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ದೇಹವು ಪಾಪದ ದೆಸೆಯಿಂದಾಗಿ ಯಾವಾಗಲೂ ಸತ್ತದ್ದಾಗಿದೆ. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ಆತ್ಮನು ನಿಮಗೆ ಜೀವವನ್ನು ಕೊಡುತ್ತಾನೆ. ಏಕೆಂದರೆ ಕ್ರಿಸ್ತನು ನಿಮ್ಮನ್ನು ನೀತಿವಂತರನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜರ್ ತರ್ ಕ್ರಿಸ್ತ್ ತುಮ್ಚ್ಯಾ ಭುತ್ತುರ್ ರ್‍ಹಾತಾ ಜಾಲ್ಯಾರ್, ಆತ್ಮೊಚ್ ತುಮ್ಚೊ ಜಿವ್ ಮನುನ್ ಹೊಲೆ, ಕಶ್ಯಾಕ್ ಮಟ್ಲ್ಯಾರ್ ಪಾಪಾಕ್ ಲಾಗುನ್ ತುಮ್ಚಿ ಆಂಗಾ ಮರುನ್ ಜಾತ್ಯಾತ್ ಜಾಲ್ಯಾರ್‍ಬಿ ದೆವಾಚ್ಯಾ, ವಾಂಗ್ಡಾ ತುಮಿ ಖರ್ಯಾ ವಾಟೆನ್ ಚಲ್ತಲಿ ಮನುನ್ ತುಮ್ಕಾ ಥವ್ನ್ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:10
30 ತಿಳಿವುಗಳ ಹೋಲಿಕೆ  

ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.


ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು