Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:11 - ಕನ್ನಡ ಸತ್ಯವೇದವು C.L. Bible (BSI)

11 ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಸತ್ತುಹೋಗುವ ನಿಮ್ಮ ದೇಹಗಳಿಗೆ ಆತನು ಜೀವವನ್ನು ಸಹ ಕೊಡುತ್ತಾನೆ. ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನು ದೇವರೇ. ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಆತನು ನಿಮ್ಮ ದೇಹಗಳಿಗೆ ಜೀವವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲೊ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ರ್‍ಹಾತಾ ಹೊಯ್ ಜಾಲ್ಯಾರ್, ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ಟಲ್ಲೊ ಹ್ಯೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರುನ್ ಹೊತ್ತ್ಯಾ ತ್ಯಾ ಆತ್ಮ್ಯಾಚ್ಯಾ ಹಾಜರ್‍ಪಾನಾಚ್ಯಾ ವೈನಾ ತುಮ್ಚ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾಕ್ನಿಬಿ ತೊ ಜಿವ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:11
37 ತಿಳಿವುಗಳ ಹೋಲಿಕೆ  

ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).


ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.


ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.


ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.


ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು