Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:14 - ಕನ್ನಡ ಸತ್ಯವೇದವು C.L. Bible (BSI)

14 ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆ ಕೊನಾಕ್ ದೆವಾಚೊ ಆತ್ಮೊ ಚಾಲ್ವುನ್ ನ್ಹೆತಾ. ತೆನಿ ದೆವಾಚಿ ಪೊರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:14
24 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.


ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.


ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು