Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:15 - ಕನ್ನಡ ಸತ್ಯವೇದವು C.L. Bible (BSI)

15 ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್ ಜೊ ಆತ್ಮೊ ದೆವಾನ್ ತುಮ್ಕಾ ದಿಲ್ಯಾನಾಯ್ ತೊ ತುಮ್ಕಾ ಗುಲಾಮ್ ಕರುಕ್ ನಾಹೊಲ್ಯಾರ್ ಭಿಂವ್ಕ್ ಕಾರನ್ ಹೊಯ್ನಾ; ಹೆಚ್ಯಾ ಬದ್ಲಾಕ್, ತೊ ಆತ್ಮೊ ತುಮ್ಕಾ ದೆವಾಚಿ ಪೊರಾ ಕರ್‍ತಾ, ಅನಿ ತ್ಯಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್, ಅಮಿ ದೆವಾಕ್ “ಬಾಬಾ! ಮಾಜ್ಯಾ ಬಾಬಾ!” ಮನುನ್ ಬಲ್ವುತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:15
30 ತಿಳಿವುಗಳ ಹೋಲಿಕೆ  

ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.


ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು.


ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.


ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು