Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:17 - ಕನ್ನಡ ಸತ್ಯವೇದವು C.L. Bible (BSI)

17 ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮಿ ತೆಚಿ ಪೊರಾ ಹೊಯ್ ಹೊಲ್ಯಾರ್, ತೆನಿ ಅಪ್ನಾಚ್ಯಾ ಲೊಕಾಕ್ನಿ ಮನುನ್ ಥವಲ್ಲ್ಯಾ ಆಶಿರ್ವಾದಾಚ್ಯಾ ಆಸ್ತಿಚೆ ವಾರಿಸ್ದಾರಿಬಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ಅಮಿ ಕ್ರಿಸ್ತಾಚ್ಯಾ ಕಸ್ಟಾತ್ನಿ ಭಾಗ್ ಘೆಟ್ಲಾಂವ್ ತರ್ ತೆಚ್ಯಾ ಮಹಿಮೆತ್‍ಬಿ ಭಾಗ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:17
35 ತಿಳಿವುಗಳ ಹೋಲಿಕೆ  

ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ನಿಮ್ಮಲ್ಲಿ ನಮಗೆ ಅಚಲವಾದ ಭರವಸೆಯಿದೆ. ಏಕೆಂದರೆ, ನಮ್ಮ ಯಾತನೆಗಳಲ್ಲಿ ನೀವು ಪಾಲುಗೊಳ್ಳುವಂತೆ ನಾವು ಪಡೆಯುವ ಸಾಂತ್ವನದಲ್ಲಿಯೂ ನೀವು ಸಹಭಾಗಿಗಳಾಗಿದ್ದೀರಿ, ಎಂಬುದು ನಮಗೆ ಗೊತ್ತಿದೆ.


ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು