ರೋಮಾಪುರದವರಿಗೆ 8:3 - ಕನ್ನಡ ಸತ್ಯವೇದವು C.L. Bible (BSI)3 ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖಾಯ್ದ್ಯಾಕ್ ಜೆ ಕಾಯ್ ಕರುಕ್ ಹೊವ್ಕ್ ನಾ, ತೆ ದೆವಾನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ಮಾನ್ಸಾಚ್ಯಾ ಸ್ವಬಾವಾಕ್ ಬಳ್ ಕಮಿ. ತೆನಿ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಮಾನ್ಸಾಚ್ಯಾ ರುಪಾತ್ ಧಾಡುನ್ ದಿಲ್ಲ್ಯಾ ವೈನಾ ಪಾಪ್ ಚುಕಿದಾರ್ ಮನುನ್ ದಾಕ್ವುನ್ ದಿಲ್ಯಾನ್, ಪಾಪಾಕ್ ಧುರ್ ಕಾಡುನ್ ಟಾಕುಕ್ ತೊ ಅಮ್ಚೊ ಪಾಪಿ ಲೊಕಾಂಚೊ ಸ್ವಬಾವ್ ಘೆವ್ನ್ ಯೆಲೊ. ಅಧ್ಯಾಯವನ್ನು ನೋಡಿ |