Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಸಗ್ಳೆ ಬಗಟಲ್ಲ್ಯಾ ತನ್ನಾ ಅಮಿ ಕಾಯ್ ಸಾಂಗುಕ್ ಹೊತಾ? ಜರ್ ದೆವ್ ಅಮ್ಚ್ಯಾ ವಾಂಗ್ಡಾ ಹಾಯ್ ತರ್ ಅಮ್ಚ್ಯಾ ವಿರೊದ್ ರ್‍ಹಾತಲೊ ಕೊನ್ ಹಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:31
31 ತಿಳಿವುಗಳ ಹೋಲಿಕೆ  

ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,


ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.


ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು