ರೋಮಾಪುರದವರಿಗೆ 8:33 - ಕನ್ನಡ ಸತ್ಯವೇದವು C.L. Bible (BSI)33-34 ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್! ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.