Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:36 - ಕನ್ನಡ ಸತ್ಯವೇದವು C.L. Bible (BSI)

36 ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದರು. ಎಂಬದಾಗಿ ಬರೆದಿರುವಂತೆ ಆಗುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಪವಿತ್ರ್ ಪುಸ್ತಕ್ ಮನ್ತಾ, “ತುಜೆಸಾಟ್ನಿ ಅಮಿ ಕನ್ನಾಬಿ ಮರ್‍ನಾಚ್ಯಾ ಅಪಾಯಾತ್ ಹಾಂವ್; ಅಮ್ಕಾ ಕಾತ್ರುನ್ ನ್ಹೆತಲ್ಯಾ ಬಕ್ರ್ಯಾ ಸರ್ಕೆ ಮನುನ್ ಘೆತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:36
18 ತಿಳಿವುಗಳ ಹೋಲಿಕೆ  

ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?


ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.


ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು