Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:38 - ಕನ್ನಡ ಸತ್ಯವೇದವು C.L. Bible (BSI)

38 ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38-39 ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಕಶ್ಯಾಕ್ ಮಟ್ಲ್ಯಾರ್, ಮಿಯಾ ಖರೆಚ್ ಸಾಂಗ್ತಾ, ಕಾಚೆನ್‍ಬಿ ಅಮ್ಕಾ ತೆಚ್ಯಾ ಪ್ರೆಮಾತ್ನಾ ಎಗ್ಳುನ್ ಧುರ್ ಕರುಕ್ ಹೊಯ್ನಾ; ಮರ್‍ನಾಕ್ ಹೊಂವ್ದಿತ್, ಜಿವಾಕ್ ಹೊಂವ್ದಿತ್, ದೆವಾಚ್ಯಾ ದುತಾಕ್ನಿ ಹೊಂವ್ದಿತ್, ಕಸ್ಲೊಬಿ ಅಧಿಕಾರ್ ಹೊಂವ್ದಿತ್ ನಾತರ್ ಅಧಿಕಾರಿ ಹೊಂವ್ದಿತ್ ,ಅತ್ತಾಚ್ಯಾ ವಿಶಯಾಕ್ನಿ ಹೊಂವ್ದಿತ್, ಫಿಡೆ ಹೊತಲ್ಯಾ ವಿಶಯಾಕ್ನಿ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:38
20 ತಿಳಿವುಗಳ ಹೋಲಿಕೆ  

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ.


ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು