Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:39 - ಕನ್ನಡ ಸತ್ಯವೇದವು C.L. Bible (BSI)

39 ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ವೈಲ್ಯಾ ಜಗಾಕ್ ಹೊಂವ್ದಿತ್ ನಾಹೊಲ್ಯಾರ್ ಖಾಲ್ತಿ ಹೊತ್ತ್ಯಾ . ನಾಹೊಲ್ಯಾರ್ ಖಾಲ್ತಿ ಹೊತ್ತ್ಯಾ ಜಗಾಕ್ ಹೊಂವ್ದಿತ್ . ಹ್ಯಾ ಸೃಸ್ಟಿತ್ಲ್ಯಾ ಕೆಕಾಬಿ ಹೊಂವ್ದಿತ್, ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಹ್ಯಾ ದೆವಾಚ್ಯಾ ಪ್ರೆಮಾತ್ನಾ ಅಮ್ಕಾ ಎಗ್ಳೆ ಕರುಕ್ ಸಾಧ್ಯ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:39
43 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.


ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.


ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.


ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು.


ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.


ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು