Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:1 - ಕನ್ನಡ ಸತ್ಯವೇದವು C.L. Bible (BSI)

1 ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಖರೆ ಬೊಲುಲಾ; ಮಿಯಾ ಕ್ರಿಸ್ತಾಕ್ ಸಮಂದ್ ಪಡಲ್ಲೊ ಹಾಂವ್ ಮಿಯಾ ಝುಟೆ ಬೊಲಿನಾ. ಮಾಜೊ ಭುತ್ತುರ್‍ಲೊ ಮನ್ ಪವಿತ್ರ್ ಆತ್ಮ್ಯಾಚ್ಯಾ ತಾಬೆತ್ ಹಾಯ್, ಅನಿ ತೊಚ್ ಮಿಯಾ ಝುಟೆ ಬೊಲಿನಾ ಹೊಲಾ ಮನುನ್ ಸಾಕ್ಷಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:1
16 ತಿಳಿವುಗಳ ಹೋಲಿಕೆ  

ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.


ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.


ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.


ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು