Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:14 - ಕನ್ನಡ ಸತ್ಯವೇದವು C.L. Bible (BSI)

14 ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಶೆ ರ್‍ಹಾತಾನಾ ದೆವ್ ಅನ್ನ್ಯಾಯ್ ಕರುಕ್ ಲಾಗ್ಲಾ ಮನುನ್ ಅಮಿ ಮನುಕ್ ಹೊತಾ ಕಾಯ್? ತಸೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:14
18 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಅವರು ಸುನ್ನತಿ ಮಾಡಿಸಿಕೊಂಡುದರಿಂದ ಪಡೆದ ಪ್ರಯೋಜನವೇನು?


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು