Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:16 - ಕನ್ನಡ ಸತ್ಯವೇದವು C.L. Bible (BSI)

16 ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ದೇವರ ದಯವು ಮನುಷ್ಯರಿಗೆ ಇಚ್ಫೈಸುವದರಿಂದಾಗಲಿ ಪ್ರಯತ್ನಿಸುವದರಿಂದಾಗಲಿ ದೊರೆಯದೆ ದೇವರು ಕರುಣಿಸುವದರಿಂದಲೇ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಶೆ ರ್‍ಹಾತಾನಾ ಸಗ್ಳೆ ಅಮ್ಕಾ ಮಾನ್ಸಾಕ್ನಿ ಕಶೆ ಪಾಜೆ ಅನಿ ಕರ್ತಾಂವ್ ಮನ್ತಲ್ಯಾ ವರ್‍ತಿ ಹೊಂದುನ್ ನಾ, ಖಾಲಿ ದೆವಾಚ್ಯಾ ದಯೆಚ್ಯಾ ವರ್‍ತಿ ಎವ್ಡೆಚ್ ಹೊಂದುನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:16
20 ತಿಳಿವುಗಳ ಹೋಲಿಕೆ  

ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು