Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:19 - ಕನ್ನಡ ಸತ್ಯವೇದವು C.L. Bible (BSI)

19 “ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರ ಇಷ್ಟವನ್ನು ಎದುರಿಸುವವರು ಇಲ್ಲದಿರುವಲ್ಲಿ ಆತನು ತಪ್ಪುಹಿಡಿಯುವದು ಹೇಗೆ ಎಂದು ನನ್ನನ್ನು ಕೇಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾವು ಮಾಡುವ ಕಾರ್ಯಗಳು ದೇವರ ಹಿಡಿತಕ್ಕೆ ಒಳಗಾಗಿರುವುದಾದರೆ, ನಮ್ಮ ಪಾಪಗಳ ನಿಮಿತ್ತ ದೇವರು ನಮ್ಮನ್ನು ದೂಷಿಸುವುದೇಕೆ?” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ತುಮ್ಚ್ಯಾತ್ಲ್ಯಾ ಕೊನ್‍ಬಿ ಮಾಕಾ, “ ಹೆ ಸಗ್ಳೆ ಅಶೆ ಹಾಯ್ ಜಾಲ್ಯಾರ್ ಕೊನ್‍ಬಿ ಎಕ್ಲೊ ಚುಕೆತ್ ಹಾಯ್ ಮನುನ್ ದೆವ್ ಕಶೆ ಹುಡ್ಕುನ್ ಕಾಡ್ತಾ? ದೆವಾಚ್ಯಾ ಮನಾ ಸರ್ಕೆ ಹೊತಲ್ಯಾಕ್ ಕೊನ್ ಅಡ್ವುಕ್ ಹೊತಾ?” ಮನುನ್ ಮನಿಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:19
19 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.


ಒಂದು ವೇಳೆ, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದೇ ರೆಂಬೆಗಳನ್ನು ಕಡಿದುಹಾಕಲಾಗಿದೆ,” ಎಂದು ನೀನು ಹೇಳಬಹುದು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು