Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:2 - ಕನ್ನಡ ಸತ್ಯವೇದವು C.L. Bible (BSI)

2 ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ಮಾತನ್ನು ಸುಳ್ಳಾಡದೆ ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ; ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ಸಾಂಗ್ತಾನಾ ಮಾಜ್ಯಾ ಲೊಕಾಂಚ್ಯಾ ಸಾಟ್ನಿ ಮಾಜ್ಯಾ ಮನಾತ್ ಹೊತಲೊ ಸಂಕಟ್ ಸರಿನಾ ತವ್ಡೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:2
15 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.


ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.


ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು