Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:20 - ಕನ್ನಡ ಸತ್ಯವೇದವು C.L. Bible (BSI)

20 ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:20
30 ತಿಳಿವುಗಳ ಹೋಲಿಕೆ  

ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು : “ನಿನಗೆ ಬುದ್ಧಿಯಿಲ್ಲ,” ಎಂದೀತೆ?


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ದೇವರಿಗೆ ಮಾರ್ಗತೋರಿಸಬಲ್ಲವನಾರು? ಆತನಿಗೆ ‘ನೀನು ಮಾಡಿರುವುದು ಅನ್ಯಾಯ,’ ಎನ್ನಬಲ್ಲವನಾರು?


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.


ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.”


ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?


ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?


ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಇವುಗಳಲ್ಲಿ ಕೆಲವು ಉತ್ತಮ ಬಳಕೆಗೂ ಇನ್ನೂ ಕೆಲವು ಸಾಮಾನ್ಯ ಬಳಕೆಗೂ ಬರುವುದುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು