Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:21 - ಕನ್ನಡ ಸತ್ಯವೇದವು C.L. Bible (BSI)

21 ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಗಾಡ್ಗಿ ಕರ್‍ತಲ್ಯಾ ಕುಂಬಾರಾಕ್ ತೆನಿ ಕರ್‍ತಲೆ ಗಾಡ್ಗೆ ಅಪ್ನಾಚ್ಯಾ ಮನಾಕ್ ಯೆತಾ ತಸೆ ಕರ್‍ತಲೊ ಹಕ್ಕ್ ಹಾಯ್, ಅನಿ ದೊನ್ ಗಾಡ್ಗಿ ಎಕುಚ್ ಚಿಕ್ಲಾಚ್ಯಾ ಮುದ್ದ್ಯಾನ್, ಎಕ್ ಬರ್‍ಯಾ ಕಾಮಾಕ್ ವಾಪರ್ತಲೆ, ಅನಿ ಅನಿಎಕ್ ಸಾದಾರನ್ ಕಾಮಾಕ್ ವಾಪರ್ತಲೆ ಅಶೆ ದೊನ್ ಗಾಡ್ಗಿ ಕರ್‍ತಲೊಬಿ ಹಕ್ಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:21
13 ತಿಳಿವುಗಳ ಹೋಲಿಕೆ  

ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು