Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:29 - ಕನ್ನಡ ಸತ್ಯವೇದವು C.L. Bible (BSI)

29 ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆಚ್ ತೆ ಇಸಾಯಿಯಾ ಪ್ರವಾದ್ಯಾನ್ ಅದ್ದಿ ಸಾಂಗಲ್ಲೆ ಸರ್ವೆಸ್ವರಾನ್ ಸಗ್ಳ್ಯಾನ್ಕಿ ಮೊಟ್ಯಾ ದೆವಾನ್ ಅಮ್ಚೆ ಸಾಟ್ನಿ ಮನುನ್ ಉಲ್ಲ್ಯಾ ಅಮ್ಚ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಹುರ್‍ವಿನಸಿ ಹೊತ್ತ್ಯಾನ್ ತರ್, ಅಮಿಬಿ ಸೊದೊಮ್ ಶಾರಾಚ್ಯಾ ಅನಿ ಗೊಮೊರಾ ಶಾರಾಚ್ಯಾ ಸರ್ಕೆ ಹೊವ್ನ್ ರ್‍ಹಾಯ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:29
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು