Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:4 - ಕನ್ನಡ ಸತ್ಯವೇದವು C.L. Bible (BSI)

4 ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ದೆವಾಚಿ ಲೊಕಾ; ತೆನಿ ತೆಂಕಾ ಅಪ್ನಾಚಿ ಪೊರಾ ಕರುನ್ ಘೆಟ್ಲ್ಯಾನ್ ಅನಿ ಅಪ್ನಾಚಿ ಮಹಿಮಾ ತೆಂಕಾ ದಾಕ್ವುನ್ ದಿಲ್ಯಾನ್; ತೆನಿ ತೆಂಚ್ಯಾ ವಾಂಗ್ಡಾ ಅಪ್ನಾಚಿ ಕರಾರಾ ಕರ್ಲ್ಲ್ಯಾನ್ ಅನಿ ಅಪ್ನಾಚೊ ಖಾಯ್ದೊ ತೆಂಕಾ ದಿಲ್ಯಾನ್; ತೆಂಚೆಕ್ಡೆ ಖರೆ ಆರಾದನ್ ಹಾಯ್; ತೆನಿ ದೆವಾನ್ ಗೊಸ್ಟ್ ದಿವ್ನ್ ದಿಲ್ಲ್ಯಾ ಗೊಸ್ಟಿಯಾ ಘೆಟ್ಲ್ಯಾನಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:4
61 ತಿಳಿವುಗಳ ಹೋಲಿಕೆ  

ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ನಿನ್ನ ಸಂಗಡ ನಾನು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ: ನಿನಗೆ ಅಧಿಕಾಧಿಕವಾದ ಸಂತತಿಯನ್ನು ಕೊಡುತ್ತೇನೆ,” ಎಂದರು.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು.


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.


ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.


ಸರ್ವೇಶ್ವರ ತಮ್ಮ ವಾಗ್ದಾನದ ಮೇರೆಗೆ ನಿಮಗೆ ಕೊಡುವ ನಾಡಿಗೆ ನೀವು ಸೇರಿದಾಗ ಈ ವಿಧಿಯನ್ನು ಅನುಸರಿಸಬೇಕು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.


ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು