Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:13 - ಕನ್ನಡ ಸತ್ಯವೇದವು C.L. Bible (BSI)

13 ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ, ದೆವಾಚ್ಯಾ ದುತಾನ್ ಜೆಕರಿಯಾಕ್ “ಜೆಕರಿಯಾ ಭಿಂವ್‍ನಕ್ಕೊ! ದೆವಾನ್ ತುಜಿ ಮಾಗ್ನಿ ಆಯಿಕ್ಲ್ಯಾನಾಯ್. ತುಜಿ ಬಾಯ್ಕೊ ಎಲಿಜಾಬೆತ್ ಎಕ್ ಲೆಕಾಕ್ ಜಲಮ್ ದಿತಾ,ತುಮಿ ತೆಕಾ ಜುವಾಂವ್ ಮನುನ್ ನಾವ್ ಥವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:13
27 ತಿಳಿವುಗಳ ಹೋಲಿಕೆ  

ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.


ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.


ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.


ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.


ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.


ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.


ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.


ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು