Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:17 - ಕನ್ನಡ ಸತ್ಯವೇದವು C.L. Bible (BSI)

17 ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ ಧನ್ಯಾಚ್ಯಾ ಫಿಡೆ-ಫಿಡೆ ಜಾತಾ.ಎಲಿಯಾ ಪ್ರವಾದ್ಯಾಚೆ ಗುನ್ ಅನಿ ಬಳ್ ತೆಕಾ ರ್‍ಹಾತಾ. ಬಾಬಾಕ್ನಿ ಅನಿ ಪೊರಾಕ್ನಿ ತೊ ಅನಿಪರ್‍ತುನ್ ಎಕ್ ಕರ್‍ತಾ; ತೊ ದೆವಾಕ್ ಖಾಲ್ತಿ ಹೊವ್ನ್ ಚಲಿನಸಲ್ಲ್ಯಾಕ್ನಿ ದೆವಾಚ್ಯಾ ವಾಟೆನ್ ಚಲಿ ಸರ್ಕೆ ಕರ್‍ತಾ; ದೆವಾಚ್ಯಾ ಲೊಕಾಕ್ನಿ ದೆವಾಸಾಟ್ನಿ ತಯಾರ್ ಕರ್‍ತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:17
38 ತಿಳಿವುಗಳ ಹೋಲಿಕೆ  

ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.


ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.


ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು