Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:28 - ಕನ್ನಡ ಸತ್ಯವೇದವು C.L. Bible (BSI)

28 ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ದೆವಾಚೊ ದುತ್ ತಿಚೆಕ್ಡೆ ಯೆಲೊ ಅನಿ “ದೆವಾಚೆ ಸಮಾದಾನ್ ತುಜ್ಯಾ ವಾಂಗ್ಡಾ ರಾಂವ್ದಿತ್! ದೆವ್ ತುಜ್ಯಾ ವಾಂಗ್ಡಾ ಹಾಯ್ ಅನಿ ದೆವಾನ್ ತುಕಾ ಆಶಿರ್ವಾದ್ ದಿಲ್ಯಾನಾಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:28
17 ತಿಳಿವುಗಳ ಹೋಲಿಕೆ  

ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.


ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!


ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.


ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ,


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.


ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು