Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:29 - ಕನ್ನಡ ಸತ್ಯವೇದವು C.L. Bible (BSI)

29 ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಕೆಯು ಆ ಮಾತಿಗೆ ತತ್ತರಿಸಿ - ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆ ಆಯ್ಕುನ್ ಮರಿ ಘಾಬರ್‍ಲಿ ಅನಿ ಹ್ಯಾ ದೆವಾಚ್ಯಾ ದುತಾನ್ ಸಾಂಗಲ್ಲ್ಯಾ ಖಬ್ರೆಚೊ ಅರ್ತ್‍ ಕಾಯ್ ಮನುನ್ ತಿ ಯವ್ಜುಕ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:29
12 ತಿಳಿವುಗಳ ಹೋಲಿಕೆ  

ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.


ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.


ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.


ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು