Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:35 - ಕನ್ನಡ ಸತ್ಯವೇದವು C.L. Bible (BSI)

35 ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ದೆವಾಚ್ಯಾ ದುತಾನ್ ಪವಿತ್ರ್ ಆತ್ಮೊ ತುಜೆ ವರ್‍ತಿ ಯೆತಾ ಅನಿ ದೆವಾಚೊ ಬಳ್ ತುಜ್ಯಾ ವಾಂಗ್ಡಾ ರ್‍ಹಾತಾ, ಹೆಚೆಸಾಟ್ನಿಚ್ ಹ್ಯಾ ಪವಿತ್ರ್ ಪೊರಾಕ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:35
26 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.


ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.


ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು