Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:48 - ಕನ್ನಡ ಸತ್ಯವೇದವು C.L. Bible (BSI)

48 ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತೆನಿ ಮಾಜಿ ಎಗ್ದಮ್ ಕಿಳ್ ಗುಲಾಮಾಚಿ ಯಾದ್ ಕರ್‍ಲ್ಯಾನ್! ಹೆಚೆನ್ ಫಿಡೆ ಸಗ್ಳಿ ಲೊಕಾ ಮಾಕಾ ಎಕ್ ಬರೆ ಭಾಗ್ ಗಾವಲ್ಲಿ ಮನುನ್ ಬಲ್ವುತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:48
19 ತಿಳಿವುಗಳ ಹೋಲಿಕೆ  

ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.


ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!


ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು