Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:51 - ಕನ್ನಡ ಸತ್ಯವೇದವು C.L. Bible (BSI)

51 ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆತನು ತನ್ನ ಭುಜಪರಾಕ್ರಮವನ್ನು ತೋರಿಸಿ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆತನು ತನ್ನ ಭುಜಬಲವನ್ನು ತೋರಿ ಗರ್ವಿಷ್ಠರನ್ನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತೆನಿ ಅಪ್ನಾಚೊ ಲೈ ಮೊಟ್ಯಾ ತಾಕ್ತಿಚೊ ಬಾವ್ಳೊ ಫಿಡೆ ಕರ್‍ಲ್ಯಾನಾಯ್ ಅನಿ ಗರುಕಿನ್ ಹೊತ್ತ್ಯಾಂಚ್ಯಾ ಸಗ್ಳ್ಯಾ ಯವ್ಜನ್ಯಾ ಹಾಳ್ ಕರುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:51
32 ತಿಳಿವುಗಳ ಹೋಲಿಕೆ  

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II


ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು


‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು