Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:64 - ಕನ್ನಡ ಸತ್ಯವೇದವು C.L. Bible (BSI)

64 ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

64 ಅನಿ ತನ್ನಾಚ್ ಜೆಕಾರಿಯಾ ಬೊಲುಕ್‍ಲಾಲೊ ಅನಿ ದೆವಾಕ್ ಹೊಗ್ಳುಕ್‍ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:64
14 ತಿಳಿವುಗಳ ಹೋಲಿಕೆ  

ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.


ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು